Sunday, December 22, 2024

ಕುರುಬೂರು ಶಾಂತಕುಮಾರ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಪ್ರತಿಭಟನೆಗೆ ಇಳಿಯುತ್ತಿದ್ದಂತೆಯೇ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ಬ್ಯಾಂಕ್​ ವೃತ್ತದಲ್ಲಿ ರೈತ ಹೋರಾಟಗಾರರು ಬೆಳಗ್ಗೆಯೇ ಪ್ರತಿಭಟನೆಗೆ ಧುಮುಕಿದರು. ಈ ವೇಳೆ ಕೆಲಕಾಲ ಪ್ರತಿಭಟನಾನಿರತ ರೈತ ಮುಖಂಡರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ತಿಳಿಗೊಳಿಸಲು ಅಲರ್ಟ್​ ಆದ ಪೊಲೀಸರು ಕುರುಬೂರು ಶಾಂತಕುಮಾರ್ ಸೇರಿದಂತೆ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಬಸ್​ನಲ್ಲಿ ಕರೆದೊಯ್ದರು. ಈ ವೇಳೆ ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES