Wednesday, January 22, 2025

ಸ್ಟಾಲಿನ್ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

ರಾಮನಗರ : ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಆಗ್ರಹಿಸಿ ಕನ್ನಡಪರ ವೇದಿಕೆಯ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದ ಐಜೂರು ವೃತ್ತದಲ್ಲಿ ಕನ್ನಡಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಕೋರಿದರು. ಅಲ್ಲದೆ, ಬಾಯಿ ಬಡಿದುಕೊಂಡ ಮತ್ತೆ ನೀವು ಹುಟ್ಟಿ ಬರಬೇಡಿ ಎಂದು ವಿಭಿನ್ನವಾಗಿ ಧರಣಿ ನಡೆಸಿದ್ದಾರೆ.

ರಾಜ್ಯದಾದ್ಯಂತ ಉಗ್ರ ಹೋರಾಟ

ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುತ್ತದೆ. ಕಾವೇರಿ ನೀರು ವಿಚಾರದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES