Monday, December 23, 2024

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು!

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಕಳೆದ ಎರಡು ದಿನಗಳಿಂದ ಜ್ವರ ಮೈಕೈ ನೋವಿನಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಬೇಲೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ಬಳಿಕ ವೈದ್ಯ ತಪಾಸಣೆ ನಡೆಸಿದ್ದು, ಸಾಮಾನ್ಯ ಜ್ವರ, ಹವಾಮಾನ ಬದಲಾವಣೆ ಪರಿಣಾಮ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನೆಟ್ಟಿಗರಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ!

ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮನೆಗೆ ಕರೆದೊಯ್ಯಲಾಗಿದೆ. ಇನ್ನು ಚಿಕಿತ್ಸೆ ಬಳಿಕ ಬೇಲೂರು ಸರಕಾರಿ ಆಸ್ಪತ್ರೆಯಿಂದ ಅಂಬ್ಯಲೆನ್ಸ್‌‌ನಲ್ಲಿ ಮನೆಗೆ ವಾಪಾಸ್ಸಾಗಿದ್ದಾರೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತರಾದವರು. ಕಿತ್ತು ತಿನ್ನುವ ಬಡತನದ ನಡುವೆಯೂ ಸಾಲು ಸಾಲು ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಿರುವ ಈ ವೃಕ್ಷಮಾತೆ ಎಂತಹವರಿಗೂ ಸ್ಪೂರ್ತಿ. ಸುಮಾರು 112ರ ವಯಸ್ಸಿನ ತಿಮ್ಮಕ್ಕ ಅವರು ಕಳೆದ 65 ವರ್ಷಗಳಿಂದ ಗಿಡಗಳನ್ನು ನೆಟ್ಟು ಪೋಷಿಸುವಂತಹ ಕಾಯಕದಲ್ಲಿ ತೊಡಗಿದ್ದಾರೆ. ಇಲ್ಲಿಯವರೆಗೂ ಸರಿಸುಮಾರು 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ‘ವೃಕ್ಷ ಮಾತೆ’ ಎಂದು ಪ್ರಖ್ಯಾತಿ ಗಳಿಸಿದ್ದಾರೆ.

RELATED ARTICLES

Related Articles

TRENDING ARTICLES