Monday, December 23, 2024

ಕರ್ನಾಟಕ ಬಂದ್​ ಗೆ ಕನ್ನಡ ಚಿತ್ರರಂಗ ಬೆಂಬಲ : ಎನ್.ಎಂ ಸುರೇಶ್​

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸುಪ್ರೀಂ ಕೋರ್ಟ್​ ನೀಡಿರುವ ಆದೇಶವನ್ನು ವಿರೋಧಿಸಿ ನಾಳೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು ಇದಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​.ಎಂ ಸುರೇಶ್​ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗದ ಬೆಂಬಲ ಸೂಚಿಸಿದ್ದು ಕನ್ನಡ ನೆಲ, ಜಲ, ಭಾಷೆ ವಿಚಾರಕ್ಕೆ ನಾಳೆ ಚಿತ್ರದ ಶೂಟಿಂಗ್, ಕಿರುತೆರೆ ಚಿತ್ರೀಕರಣ ಸಿನಿಮಾ ಥಿಯೇಟರ್‌ಗಳು ಸ್ಥಗಿತಗೊಳಿಸಿ ಬಂದ್​ ನಲ್ಲಿ ಭಾಗಿಯಾಗಲು ತೀರ್ಮಾನಿಸಿದೆ.

ಇದನ್ನೂ ಓದಿ: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ!

ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಚಿತ್ರಮಂದಿರಗಳು ಕ್ಲೋಸ್​ ಆಗಲಿದ್ದು ನಾಳೆ ಬೆಳಗ್ಗೆ 9 ಗಂಟೆಗೆ ಫಿಲ್ಮಂ ಚೇಂಬರ್​ನಿಂದ ಟೌನ್​ಹಾಲ್​ ವರೆಗೆ ಮೆರವಣಿಗೆ ನಡೆಯಲಿದ್ದು ಈ ಮೆರವಣಿಗೆಯಲ್ಲಿ ಚತ್ರರಂಗದ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಜೊತೆಗೆ ನಟ ಶಿವರಾಜ್‌ಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES