Monday, December 23, 2024

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ!

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬೈಕ್​​ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ಗ್ರಾಮದ ನಿವಾಸಿ ಲೋಕೇಶ್ ಗಂಭೀರ ಗಾಯಗೊಂಡಿದ್ದಾರೆ. ಲೋಕೇಶ್ ರಿಪ್ಪನ್​​ಪೇಟೆಗೆ ಬಂದು ತಮ್ಮ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್ ಶಫರ್ಡ್ ಚರ್ಚ್ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಚಲಿಸುತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಇದನ್ನೂ ಓದಿ: ಬಂದ್‌ ಹೆಸರಲ್ಲಿ ರಾಜಕೀಯ ಬೇಡ : ಸಚಿವ ಜಿ.ಪರಮೇಶ್ವರ್​

ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್​​ಗೆ ರವಾನಿಸಲಾಗಿದೆ. ಸ್ಥಳಕ್ಕೆ PSI ಪ್ರವೀಣ್ SP ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES