Wednesday, January 22, 2025

ರಾಜಧಾನಿಯಲ್ಲಿ ಜೋರಾಯ್ತು ಕಾವೇರಿ ಕಾವು!

ಬೆಂಗಳೂರು: ಕರ್ನಾಟಕದ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಜೋರಾಗಿದೆ.

ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಾವಲಿಗೆ ಇಳಿದಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆ.ಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್​ ಗೆ ಅನುಮತಿ ಇಲ್ಲ: ಪೊಲೀಸ್​ ಕಮಿಷನರ್ ದಯಾನಂದ್​ ವಾರ್ನಿಂಗ್​!​

ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕಿವಿಗೆ ಚೆಂಡು ಹಾಕಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡುವುದಕ್ಕೆ ಅಲರ್ಟ್ ಆದ ಪೋಲಿಸರು, ಪ್ರತಿಭಟಿಸಿತ್ತಿದ್ದವರನ್ನ ಕೆ.ಆರ್​ ಮಾರುಕಟ್ಟೆಯಿಂದ ಹೊರ ಕಳುಹಿಸಿದರು.

RELATED ARTICLES

Related Articles

TRENDING ARTICLES