Saturday, November 2, 2024

ವಾಸ್ತವಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು : ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಬಗ್ಗೆ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ನಡುವೆ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಸ್ತಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ. ಲೀಗಲ್ ಟೀಮ್, ತಜ್ಞರ ಜೊತೆ ಸಭೆ ಬಳಿಕ ಒಂದು ತೀರ್ಮಾನ ಮಾಡುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಂದು CWMA ಸಭೆ ಇತ್ತು. ನಾವು ಇದರ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನೆ ಮಾಡಲು ಸಾಧ್ಯವಾ ಅಂತ ಕಾನೂನು ತಜ್ಞರ ತಂಡದ ಜೊತೆ ಕೇಳಿದ್ದೇನೆ. ನಾವು ಪ್ರಾಧಿಕಾರದ ಮುಂದೆ ಎಲ್ಲಾ ವಾಸ್ತವಾಂಶಗಳನ್ನು ಮುಂದೆ ಇಟ್ಟಿದ್ದೇವೆ. ಆದರೂ ನಮಗೆ ಹಿನ್ನಡೆ ಆಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾನೂನು ತಜ್ಞರ ಸಭೆ

CWMA, CWRC ಸಭೆಯಲ್ಲಿ ಕರ್ನಾಟಕಕ್ಕೆ ಪದೇ ಪದೆ ಹಿನ್ನಡೆಯಾಗುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್​, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎಲ್.ದತ್ತು, ಗೋಪಾಲಗೌಡ, ರವೀಂದ್ರಬಾಬು, ರಾಜೇಂದ್ರಬಾಬು, ಎಂ.ಎನ್.ವೆಂಕಟಾಚಲಯ್ಯ ಸಭೆಯಲ್ಲಿ ಇದ್ದರು.

CWMA ಆದೇಶ ಉಲ್ಲಂಘಿಸಿದರೆ ಆಗುವ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಅಲ್ಲದೆ, ಮುಂದಿನ ಕಾನೂನು ಹೋರಾಟದ ಬಗ್ಗೆಯೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಚರ್ಚೆ ನಡೆಸಲಾಗಿದೆ.

RELATED ARTICLES

Related Articles

TRENDING ARTICLES