Monday, December 23, 2024

ಕ್ಷಮಿಸಿ..! ನಟ ಸಿದ್ದಾರ್ಥ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ : ಇದು ಶಿವಣ್ಣ ದೊಡ್ಡ ಗುಣ

ಬೆಂಗಳೂರು : ನಟ ಸಿದ್ದಾರ್ಥ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಸ್ಯಾಂಡಲ್​​​ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಶಿವಣ್ಣ ಸಿನಿ ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಕಾವೇರಿ ಜಲ ವಿವಾದದಲ್ಲಿ ಕನ್ನಡಿಗರು, ರಾಜ್ಯದ ರೈತರ ಪರ ಬೆಂಬಲ ಸೂಚಿಸಿ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡಿಗರು ಎಲ್ಲರನ್ನೂ ಸ್ವಾಗತಿಸುತ್ತೇವೆ. ಪ್ರತಿಯೊಬ್ಬರಿಗೂ ಸಮಸ್ಯೆ ಇದೆ. ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು. ಸಮಸ್ಯೆಯನ್ನು ಎಲ್ಲರೂ ಟಾಲರೇಟ್‌ ಮಾಡಬೇಕು, ಪರಿಹಾರ ಏನು ಎಂಬುದನ್ನು ನೋಡಬೇಕು. ಆಗ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಹೇಳಿದ್ದಾರೆ.

ನಾವು ಏನೇ ಮಾಡಿದರೂ ಬೇರೊಬ್ಬರಿಗೆ ಹರ್ಟ್ ಆಗಬಾರದು. ನಟ ಸಿದ್ದಾರ್ಥ್ ಅವರಿಗೆ ನಾನು ಈ ಮೂಲಕ ಕ್ಷಮೆ ಕೇಳುತ್ತೇನೆ. ಚಿಕ್ಕು ಚಿತ್ರದ ಪ್ರಚಾರಾರ್ಥ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅದಕ್ಕೆ ಅಡ್ಡಿಪಡಿಸಲಾಗಿತ್ತು. ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ಶಿವರಾಜ್​ಕುಮಾರ್ ತಿಳಿಸಿದ್ದಾರೆ.

ಶಾಶ್ವತ ಪರಿಹಾರ ಸಿಗಬೇಕು

ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಘರ್ಷಣೆ. ನಾವು, ನೀವು ಎಷ್ಟೇ ಧೈರ್ಯ ಕೊಟ್ಟರೂ ರೈತರಿಗೆ ಮಳೆಯಿಂದ ಪರಿಹಾರ ಸಿಗಬೇಕು ಎಂದು ನಟ ವಿಜಯ ರಾಘವೇಂದ್ರ ಹೇಳಿದ್ದಾರೆ. ಸರ್ಕಾರಗಳು ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಬೇಕು. ಈ ಸಮಸ್ಯೆಗೆ ಪರಿಹಾರ ಸಿಗುತ್ತಾ ಅನ್ನೋ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು. ಇದಕ್ಕೆ ನಮ್ಮ ಕಲಾವಿದರು, ತಂತ್ರಜ್ಞರು, ಇಡೀ ಚಿತ್ರರಂಗ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES