ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಇಂದು ದೆಹಲಿಯಲ್ಲಿ ಸಭೆ ನಡೆಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಮತ್ತೆ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದೆ.
ಕಾವೇರಿ ನೀರು ನಿಯಂತ್ರಣಾ ಮಂಡಳಿ ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶ (ಶಿಫಾರಸು)ವನ್ನು CWRC ಎತ್ತಿಹಿಡಿದಿದೆ.
ಈ ಮೂಲಕ ಕಾವೇರಿ ಜಲ ವಿವಾದದಲ್ಲಿ ಎರಡು ಬಾರಿ ಹಿನ್ನಡೆ ಅನುಭವಿಸಿದ್ದ ಕರ್ನಾಟಕಕ್ಕೆ ಮತ್ತೊಮ್ಮೆ ಭಾರಿ ಅಘಾತವಾಗಿದೆ. ಸೆಪ್ಟಂಬರ್ 26ರಂದು ಕಾವೇರಿ ನದಿ ನೀರು ವಿವಾದ ಸಂಬಂಧ ನಡೆದಿದ್ದ ಸಭೆಯಲ್ಲಿ ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರವು ನಿತ್ಯ 3,000 ಕ್ಯೂಸೆಸ್ ನಂತೆ ಮುಂದಿನ 18 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು.