Monday, December 23, 2024

ಕಾವೇರಿ ನೀರು ಹಂಚಿಕೆ: ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ!

ಬೆಂಗಳೂರು : ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ.

ಇದನ್ನೂ ಓದಿ:ಕಾವೇರಿಗಾಗಿ ಮಳವಳ್ಳಿಯಲ್ಲಿ ರಕ್ತ ಚಳವಳಿ!

ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿ, ನಿಮ್ಮ ಸಮಸ್ಯೆ ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಅಂತ ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನ ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ನೀಡಿದರು.

RELATED ARTICLES

Related Articles

TRENDING ARTICLES