Wednesday, January 22, 2025

ಭಾರತ-ಇಂಗ್ಲೆಂಡ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ

ಬೆಂಗಳೂರು : ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಇಂದಿನ ಅಭ್ಯಾಸ ಪಂದ್ಯದಲ್ಲಿ ಟಾಸ್​ ಗೆದ್ದಿರುವ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ವಿಶ್ವಕಪ್-2023ರ ನಾಲ್ಕನೇ ಅಭ್ಯಾಸ ಪಂದ್ಯವು ಭಾರತ ಹಾಗೂ ಇಂಗ್ಲೆಂಡ್​ ನಡುವೆ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ, ಭಾರಿ ಮಳೆಯಿಂದಾಗಿ ಪಂದ್ಯ ಇನ್ನೂ ಆರಂಭವಾಗಿಲ್ಲ.

ಒಂದು ವೇಳೆ ಮಳೆ ನಿಂತು ಪಂದ್ಯ ಆರಂಭವಾದರೆ ಅದರ ನೇರ ಪ್ರಸಾರವನ್ನು ಸ್ಟಾರ್​ ಸ್ಪೋರ್ಟ್ಸ್ ಮತ್ತು ಡಿಡಿ ಸ್ಪೋರ್ಟ್ಸ್​ನಲ್ಲಿಯೂ ವೀಕ್ಷಿಸಬಹುದು. ಪಂದ್ಯದ ಲೈವ್​ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ನಲ್ಲಿ ಇರುತ್ತದೆ.

ಭಾರತ ತಂಡ :

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ

ಇಂಗ್ಲೆಂಡ್ ತಂಡ :

ಡೇವಿಡ್ ಮಲಾನ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಬೆನ್ ಸ್ಟೋಕ್ಸ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ರೀಸ್ ಟೋಪ್ಲಿ, ಮಾರ್ಕ್ ವುಡ್

RELATED ARTICLES

Related Articles

TRENDING ARTICLES