Monday, December 23, 2024

ಲಿಂಗಾಯತರು ಸಿಎಂ ಆಗಬೇಕು : ಶಾಮನೂರು ಶಿವಶಂಕರಪ್ಪ

ದಾವಣಗೆರೆ : ಕಾಂಗ್ರೆಸ್‌ ಪಾಳಯದಲ್ಲಿ ಡಿಸಿಎಂ (DCM) ಕೂಗು ಎದ್ದಿತ್ತು. ಆದರೆ, ಈಗ ಲಿಂಗಾಯತ ಸಿಎಂ ಕೂಗು ಎದ್ದಿದೆ. ಡಿಸಿಎಂ ತಗೊಂಡು ಏನು ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೇರವಾಗಿಯೇ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನಿಜಲಿಂಗಪ್ಪ, ಜೆ.ಎಚ್. ಪಾಟೇಲರು ಇದ್ದಾಗ ಎಲ್ಲರೂ ಚೆನ್ನಾಗಿದ್ದರು. ಈಗ ನಮ್ಮವರು ಕಂಗಾಲಾಗಿದ್ದಾರೆ. ಸರ್ಕಾರದ ಆಯಕಟ್ಟಿನ ಪ್ರಮುಖ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಸಮುದಾಯವರಿಗೆ ಮಣೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಲಿಂಗಾಯತರಿಗೆ ಅನ್ಯಾಯವಾಗಲ್ಲ

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರು ಮಾತ್ರವಲ್ಲ ಯಾವುದೇ ಜಾತಿ, ಧರ್ಮದವರಿಗೂ ಅನ್ಯಾಯವಾಗುವುದಿಲ್ಲ’ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES