Sunday, December 22, 2024

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆ ಇಂದು

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಪ್ರಾಧಿಕಾರದ ಆದೇಶ ಹಿನ್ನೆಲೆ ಇಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಸಭೆ ನಡೆಸಲಾಗುತ್ತಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಭೆ ನಡೆಯಲಿದೆ.

ಇಂದು 11 ಗಂಟೆಗೆ ನಡೆಯಲಿರುವ ಸಭೆಗೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಇಂದಿನ ಸಭೆಯಲ್ಲಿ ಮುಂದಿನ ಹೋರಾಟದ ರೂಪು-ರೇಷೆ ಬಗ್ಗೆ ಚರ್ಚೆ ಮಾಡಲಾಗುತ್ತೆ. ಸರ್ಕಾರ ಪ್ರಾಧಿಕಾರದ ಆದೇಶದ ಬಗ್ಗೆ ಸ್ಪಷ್ಟನೆ ನೀಡಬೇಕು. ಪ್ರಾಧಿಕಾರದ ರದ್ಧತಿಗೆ ಕಾನೂನು ಹೋರಾಟ ಮಾಡಬೇಕು.
ಯಾವುದೇ ಕಾರಣಕ್ಕೂ ನೀರು ಬಿಡೋದಿಲ್ಲ ಅನ್ನೋ ದೃಢ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಬೇಕು.

ಇದನ್ನೂ ಓದಿ: ಪಾಪ..! ತರಗತಿಯಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಈ ಎಲ್ಲಾ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ. ಇಂದು ಹಲವಾರು ಸಂಘಟನೆಗಳು ಸಭೆಯ ತೀರ್ಮಾನವನ್ನು ಎದುರು ನೋಡುತ್ತಿದ್ದು, ತೀರ್ಮಾನ ಸರಿಯಿಲ್ಲದಿದ್ದರೆ ಸಮಿತಿ ಉಗ್ರ ಹೋರಾಟಕ್ಕೆ ನಿರ್ಧಾರ ಮಾಡಬಹುದು.

RELATED ARTICLES

Related Articles

TRENDING ARTICLES