Sunday, January 19, 2025

ಏಳು ಮಂದಿ ಲಿಂಗಾಯತ ಸಚಿವರು ಸಂಪುಟದಲ್ಲಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯ ಕಡಗಣನೆ ಮಾಡಲಾಗುತ್ತಿದೆ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರು ಮಾತ್ರವಲ್ಲ ಯಾವುದೇ ಜಾತಿ, ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ಮುಂದಿನ ಪರಿಸ್ಥಿತಿಯನ್ನು ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES