Sunday, January 19, 2025

ಈ ಬಾರಿ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ : ರಚಿತಾ ರಾಮ್

ಬೆಂಗಳೂರು : ದಶಕದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಡಿಂಪಲ್​ ಕ್ವೀನ್​ ರಚಿತಾ ರಾಮ್ ತಮ್ಮ ಅಪಾರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ರುಚ್ಚು ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಣೆ ಮಾಡಬೇಕು ಎಂದುಕೊಂಡಿದ್ದ ಫ್ಯಾನ್ಸ್​ಗೆ ಇದೀಗ ಬ್ಯಾಡ್​ ನ್ಯೂಸ್​ ಕೊಟ್ಟಿದ್ದಾರೆ ಬುಲ್ ಬುಲ್ ಬೆಡಗಿ. ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ರಚಿತಾ ರಾಮ್​ ಹೇಳಿದ್ದು, ಯಾರು ಮನೆಯ ಬಳಿ ಬರಬೇಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಕಾವೇರಿ ಜಲವಿವಾದ ಕಾವೇರುತ್ತಿದೆ. ಮಂಡ್ಯದಲ್ಲಿ ಪ್ರತಿಭಟನೆಯ ಜೋರಾಗಿದ್ದು, ನೀರಿಗಾಗಿ ರೈತರ ಕೂಗು ಮುಗಿಲುಮುಟ್ಟಿದೆ. ನಮ್ಮ ನಾಡಿನ ನೆಲ, ಜಲಕ್ಕಾಗಿ ಹೋರಾಟಗಳು ನಡೆಯುತ್ತಿದ್ದು, ಸ್ಯಾಂಡಲ್​ವುಡ್​ ಸೆಲೆಬ್ರೆಟಿಗಳು ಅನ್ನದಾತನ ಬೆಂಬಲಕ್ಕೆ ನಿಂತಿದ್ದಾರೆ. ಈ ಸಂದರ್ಭದಲ್ಲಿ ಬರ್ತ್​ ಡೇ ಆಚರಿಸಿಕೊಳ್ಳಲು ಮನಸ್ಸಿಲ್ಲ ಎಂದು ರಚಿತಾ ರಾಮ್​ ತಿಳಿಸಿದ್ದಾರೆ.

ನಿಮ್ಮ ಪ್ರೀತಿ ಸದಾ ನನ್ನೊಂದಿಗೆ ಇರಲಿ

‘ಎಲ್ಲರಿಗೂ ನಮಸ್ಕಾರ. ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ (ಅಕ್ಟೋಬರ್​ 3 ) ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸೂಕ್ತವಲ್ಲ ಎಂದು ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನಿ ನನ್ನೊಂದಿಗೆ ಸದಾ ಇರಲಿ’ ನಿಮ್ಮ ರಚ್ಚು  ಎಂದು ನಟಿ ರಚಿತಾ ರಾಮ್​ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES