Monday, December 23, 2024

ರಸ್ತೆ ದಾಟುತ್ತಿದ್ದ ಯುವಕನ ಉಸಿರು ಕಸಿದ ಕಿಲ್ಲರ್ KSRTC

ಮೈಸೂರು : ರಸ್ತೆ ದಾಟುತ್ತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಜೆಎಸ್​ಎಸ್​(JSS) ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗ ನಡೆದಿದೆ.

ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್(28) ಎಂಬ ಯುವಕ ಮೃತಪಟ್ಟಿದ್ದಾನೆ. ಯುವಕ ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾರಿಗೆ ಬಸ್​ನ್ನು ನಂಜನಗೂಡು ಸಂಚಾರ ಪೊಲೀಸರು ವಶಪಡಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಸ್ಪರ್ಶದಿಂದ ಎತ್ತು ಸಾವು

ವಿದ್ಯುತ್ ಸ್ಪರ್ಶದಿಂದ ಎತ್ತು ಸಾವನ್ನಪ್ಪಿದ್ದು ರೈತ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಕಾಲಿಗೆ ತಗುಲಿ ಘಟನೆ ಸಂಭವಿಸಿದೆ. ಗ್ರಾಮದ ರೈತ ಪುರುಷೋತ್ತಮ ಎಂಬುವವರಿಗೆ ಸೇರಿದ ಎತ್ತು ಮಥತಪಟ್ಟಿದೆ. ಕೂಲಿಗೆ ರೈತರ ಜಮೀನಿಗೆ ಉಳುಮೆಗೆ ಹೋದಾಗ ಘಟನೆ ನಡೆದಿದೆ. ಜಮೀನಿನಲ್ಲಿ ಟ್ರಾನ್ಸ್ಫಾರ್ಮಾರ್ ನಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ.

RELATED ARTICLES

Related Articles

TRENDING ARTICLES