Monday, December 23, 2024

ಭೀಕರ ಅಪಘಾತ : ಲಾರಿ ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ವಿಕಾಸ್ (18), ಯಶ್ವಂತ್ (17) ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು. ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ನಿನ್ನೆ (ಶನಿವಾರ) ತಡರಾತ್ರಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ವೇಗವಾಗಿ ಬಂದ ಲಾರಿ ರಸ್ತೆ ಮೇಲೆ ಬಿದ್ದಿದ್ದ ವ್ಯಕ್ತಿಗಳ ಮೇಲೆ ಹರಿದಿದೆ. ಲಾರಿ ಹರಿದ ರಭಸಕ್ಕೆ ಯುವಕರ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಘಟನೆ ಬಳಿಕ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಭದ್ರಾವತಿ ತಾಲೂಕು ಅರದೊಟ್ಲು ಗ್ರಾಮದ ಗಗನ್‌ಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES