Friday, May 17, 2024

ದೇವೇಗೌಡ್ರು ಜೊತೆ ಇರ್ಬೇಕು ಅನ್ನೋದು ಮೋದಿ ಅಪೇಕ್ಷೆ : ನಿಖಿಲ್ ಕುಮಾರಸ್ವಾಮಿ

ರಾಮನಗರ : ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು, ಅಧಿಕಾರದಿಂದ ದೂರವಿಡಲು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದೆ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಮನಗರದ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರಾದೃಷ್ಟಕರ ಹಣದ ಆಮೀಷಕ್ಕೆ ಕಾಂಗ್ರೆಸ್ ಬಂದಿದೆ. ನಮ್ಮಲ್ಲಿ ಗಿಫ್ಟ್ ಕಾರ್ಡ್​ಗಳನ್ನೂ ಸಹ ಹಂಚಿದ್ರೂ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ. ದೇವೇಗೌಡ ಸಾಹೇಬ್ರು ನಮ್ಮ ಜೊತೆ ಇರಬೇಕು ಅನ್ನೋದು ನರೇಂದ್ರ ಮೋದಿಯವರ ಅಪೇಕ್ಷೆ. ನಮ್ಮನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ ಎಂದು ಮೋದಿಯನ್ನ ಕೊಂಡಾಡಿದರು.

ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ

ಜೆಡಿಎಸ್ ಸಭೆ ಬಗ್ಗೆ ಮಾತನಾಡಿ, ಪಕ್ಷದ ವರಿಷ್ಠರ ಜೊತೆ ನಾಯಕರು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ‌. ಪಕ್ಷದ ಹಿರಿಯ ನಾಯಕರೆಲ್ಲರೂ ಇಂದಿನ ಸಭೆಯಲ್ಲಿ ಭಾಗಿಯಾಗಿದ್ದಾರೆ. ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಾಗುವುದು. ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಎಂದು ಹೇಳಿದರು.

ಕಂದಕೂರ್ ಅವರ ಜೊತೆ ಕೂತು ಮಾತನಾಡಿದ್ದೇವೆ. ಮೊನ್ನೆ ಅವರು ಒಂದಷ್ಟು ಸಲಹೆ ಸೂಚನೆ ನೀಡಿದ್ದಾರೆ. ಸ್ಥಳೀಯವಾಗಿ ಇರುವ ಸಮಸ್ಯೆಗಳ ಬಗ್ಗೆ ಹೇಳಿದ್ದಾರೆ. ಅದರ ಹೊರತಾಗಿ ಯಾವುದೇ ಅಸಮಾಧಾನ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

RELATED ARTICLES

Related Articles

TRENDING ARTICLES