Monday, December 23, 2024

ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್ ಬೆಲೆ 209 ರೂ. ಏರಿಕೆ

ಬೆಂಗಳೂರು : ಅಕ್ಟೋಬರ್ ತಿಂಗಳ ಮೊದಲ ದಿನವೇ ಶಾಕಿಂಗ್ ನ್ಯೂಸ್! ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ 1731.50 ರೂ. ಆಗಲಿದೆ ಎಂದು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟ ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಅನುಮೋದಿಸಿತು. ಅದನ್ನು ಮುಂದಿನ 3 ವರ್ಷಗಳಲ್ಲಿ ನೀಡಲಾಗುತ್ತಿದ್ದೆ. ಈ ಸಂಪರ್ಕಗಳ ಒಟ್ಟು ವೆಚ್ಚ 1,650 ಕೋಟಿ ರೂ. ಆಗಿದೆ. ಉಜ್ವಲಾ ಯೋಜನೆಯಡಿ ನೀಡಲಾಗುತ್ತಿರುವ ಅಸ್ತಿತ್ವದಲ್ಲಿರುವ ಠೇವಣಿ ಮುಕ್ತ ಸಂಪರ್ಕಗಳ ಮುಂದುವರಿಕೆಯಲ್ಲಿ ಈ ಹೊಸ ಸಂಪರ್ಕಗಳನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES