Thursday, January 23, 2025

ನೋಡ ನೋಡುತ್ತಲೇ ಧಗ ಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಬೆಂಗಳೂರು : ಆಕಸ್ಮಿಕವಾಗಿ ಎಲೆಕ್ಟ್ರಿಕ್ ​ಕಾರಿಗೆ ಬೆಂಕಿ ಹೊತ್ತಿ ಸುಟ್ಟು ಭಸ್ಮವಾಗಿರುವಂತಹ ಘಟನೆ ಬೆಂಗಳೂರಿನ ಜೆ.ಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ವತಃ ಕಾರು ಮಾಲೀಕರೇ ಚಾಲಾಯಿಸುತ್ತಿದ್ದು, ಈ ವೇಳೆ ಬಾನೆಟ್​ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅವರು ತಕ್ಷಣ ಕಾರು ನಿಲ್ಲಿಸಿ ಹೊರ ಬಂದಿದ್ದಾರೆ.

ನೋಡ ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಕಾರು ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ಈ ಘಟನೆಯ ವಿಡಿಯೋವನ್ನು ಸಾರ್ವಜನಿಕರು ತಮ್ಮ ಮೊಬೈಲ್​ಗಳಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗುತ್ತಿದೆ.

ಘಟನೆಗೆ ಕಾರಣ ಏನು?

ರಾಕೇಶ್​ ಪ್ರಕಾಶ್​ ಎನ್ನುವವರು ತಮ್ಮ X​ನಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದ  ದಾಲ್ಮಿಯಾ ವೃತ್ತದ ಬಳಿ ಎಲೆಕ್ಟ್ರಾನಿಕ್​ ಕಾರಿಗೆ ಬೆಂಕಿಗೆ ಆಹುತಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES