Wednesday, January 22, 2025

ಶಿವಮೊಗ್ಗ ಗಲಾಟೆ : ಈ ಜಿಹಾದಿ ಸರ್ಕಾರದಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ?: ಬಿಜೆಪಿ ಕಿಡಿ

ಬೆಂಗಳೂರು : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪೊಲೀಸರ ಮೇಲೆಯೇ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಹಿಂದೂಗಳು ಇರುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ‘ಜಾತ್ಯಾತೀತ’ ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ.

ತಲ್ವಾರ್ ಮೆರವಣಿಗೆ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತದೆ. ಇದಕ್ಕೆ ಅನುಮತಿ ನೀಡಿದ ಕಾಂಗ್ರೆಸ್ ಸರ್ಕಾರವೇ ತಿಳಿಸಬೇಕು . ಹಿಂದೂಗಳನ್ನು ಮುಗಿಸುತ್ತೇವೆ ಎಂದು ಹೇಳಿದ ಜಿಹಾದಿ ಸಂಘಟನೆಗಳಿಗೆ ಬೆಂಬಲವಾಗಿ ಕಾಂಗ್ರೆಸ್ ಸರ್ಕಾರ ನಿಂತಿರುವುದಕ್ಕೆ ಬೇರೇನು ಸಾಕ್ಷಿ ಬೇಕು ಎಂದು ಕಿಡಿಕಾರಿದೆ.

ಗಣಪತಿಗೆ ನೂರೆಂಟು ಅನುಮತಿ ಯಾಕೆ?

ಗಣೇಶ ಚತುರ್ಥಿಗೆ ಹಿಂದೂಗಳು ಸ್ಥಾಪಿಸುವ ಗಣಪತಿಗೆ ನೂರೆಂಟು ಅನುಮತಿ ಕೇಳುವ ಕಾಂಗ್ರೆಸ್​ ಸರ್ಕಾರ, ಸಮಾಜದ ಶಾಂತಿ ಕದಡುವ ಇಂತಹ ಮೆರವಣಿಗೆಗಳಿಗೆ ಅನುಮತಿ ನೀಡಿದ್ದರ ಹಿನ್ನಲೆ ಏನು? ಈ ಜಿಹಾದಿ ಸರ್ಕಾರದಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ? ಎಂದು ಕಾಂಗ್ರೆಸ್​ ವಿರುದ್ಧ ಆಕ್ರೋಶ ಹೊರಹಾಕಿದೆ.

RELATED ARTICLES

Related Articles

TRENDING ARTICLES