Monday, December 23, 2024

ಹಾಡಹಗಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಕಾಮುಕರ ಬಂಧನ

ಬೆಳಗಾವಿ : ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್​ನ ಮನೆಯೊಂದರಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ರಮೇಶ ಉದ್ದಪ್ಪ ಖಿಲಾರಿ, ದುರ್ಗಪ್ಪ ಸೋಮಲಿಂಗಪ್ಪ ವಡ್ಡರ, ಯಲ್ಲಪ್ಪ ಸಿದ್ದಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪ್ರಕಾಶ ಪೂಜೇರಿ, ರಾಮಸಿದ್ದ ಗುರಶಿದ್ದಪ್ಪ ತಪ್ಸಿ ಎಂದು ಗುರುತಿಸಲಾಗಿದೆ.

ಓರ್ವ ಆರೋಪಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮತ್ತೋರ್ವ ಆರೋಪಿ ಬಸವರಾಜ ವಸಂತ ಖಿಲಾರಿ ಪರಾರಿಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸೆ.29ರಂದು ಮಹಿಳೆಯಿಂದ ದೂರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಈ ಬಗ್ಗೆ ಮಾಹಿತಿ ನೀಡಿದ್ದು, ಸೆಪ್ಟೆಂಬರ್​ 5ರ ಶಿಕ್ಷಕರ ದಿನಾಚರಣೆಯಂದು ಘಟನೆ ನಡೆದಿದೆ. ಇತ್ತೀಚಿನ ಡಕಾಯಿತಿ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬೆಣಚಿನಮರಡಿ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್ ಎಸ್ಪಿ ಸರ್ಕಾರ್​ ಗ್ಯಾಂಗ್​ನ ಆರು ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸೆಪ್ಟೆಂಬರ್​ 29ರಂದು ನೊಂದ ಮಹಿಳೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES