ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ನಿರಂತರವಾಗಿ ಮಳೆಯಾಗಲಿದೆ. ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಟ್ರಾಫಿಕ್ ಬಿಸಿ!
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಶಿವಮೊಗ್ಗ, ತುಮಕೂರಿನಲ್ಲಿ ಅಕ್ಟೋಬರ್ 9ರವರೆಗೆ ಮಳೆಯಾಗಲಿದ್ದು, ಬಳಿಕ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.