Monday, December 23, 2024

ಉಸಿರಾಟ ಸಮಸ್ಯೆ : ಸಾಲುಮರದ ತಿಮ್ಮಕ್ಕ ದಿಢೀರ್ ಆಸ್ಪತ್ರೆಗೆ ದಾಖಲು!

ಬೆಂಗಳೂರು : ವೃಕ್ಷಮಾತೆ, ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದಾಗಿ ದಿಢೀರನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯ ಸರ್ಕಾರದ ಪರಿಸರ ರಾಯಭಾರಿಯಾಗಿರುವ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ತಿಮ್ಮಕ್ಕ ಅವರ ಪುತ್ರ (ದತ್ತು ಪುತ್ರ) ಉಮೇಶ್​ ಅವರು ಬೇಳೂರು ಸಮೀಪದಲ್ಲಿರುವ ಬಳ್ಳೂರು ಗ್ರಾಮದಿಂದ ಅಪೋಲೋ ಆಸ್ಪತ್ರೆಗೆ ಆಂಬುಲೆನ್ಸ್​ ಮೂಲಕ ಕರೆದೊಯ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಈ ಹಿಂದೆ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು ತಿಮ್ಮಕ್ಕ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಬರಬೇಕಿದೆ.

ಸಂಪುಟ ದರ್ಜೆ ಸ್ಥಾನಮಾನದಲ್ಲಿ ಮುಂದುವರಿಕೆ

ಸಾಲುಮರದ ತಿಮ್ಮಕ್ಕ ಅವರಿಗೆ ಸದ್ಯ 112 ವರ್ಷ ವಯಸ್ಸು. ಕಳೆದ 65 ವರ್ಷಗಳಿಂದ ಅವರು ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿದ್ದಾರೆ. ಈವೆರಗೆ 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ವೃಕ್ಷಮಾತೆ ಎಂದು ಖ್ಯಾತಿ ಗಳಿಸಿದ್ದಾರೆ. ರಾಜ್ಯ ಸರ್ಕಾರ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರಿಸಿದೆ.

RELATED ARTICLES

Related Articles

TRENDING ARTICLES