Wednesday, January 22, 2025

ಲಾರಿ ಚಾಲನೇ ವೇಳೆ ಹೃದಯಾಘಾತ, ವಿದ್ಯುತ್​ ಕಂಬಕ್ಕೆ ಗುದ್ದಿ ಸಾವು !

ಚಾಮರಾಜನಗರ : ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ತಮಿಳುನಾಡು ಮೂಲದ ಸೆಲ್ವರಾಜ್ ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ನಿಂತಿದೆ.

ಇದನ್ನೂ ಓದಿ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.9ರವರೆಗೆ ಮಳೆ!

ಇನ್ನು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES