Friday, November 22, 2024

ಕೋವಿಡ್ ನಿಯಮ ಉಲ್ಲಂಘನೆ : ‘ಕೈ’ ನಾಯಕರ ಮೇಲಿನ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್​ ನಿಯಮ ಉಲ್ಲಂಘಿಸಿದ್ದ ಕಾಂಗ್ರೆಸ್​ ನಾಯಕರಿಗೆ ಕೊನೆಗೂ ಬಿಗ್​ ರಿಲೀಫ್​ ಸಿಕ್ಕಿದೆ. ಹೈಕೋರ್ಟ್, ಕಾಂಗ್ರೆಸ್ ನಾಯಕರ‌ ವಿರುದ್ಧದ ಕೇಸ್ ರದ್ದುಪಡಿಸಿದೆ.

ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಕಾರಣಕ್ಕೆ ಅಂದಿನ ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರ‌ ವಿರುದ್ಧದ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಬಿ.ಕೆ. ಹರಿಪ್ರಸಾದ್ ವಿರುದ್ಧದ ಪ್ರಕರಣ ಪ್ರಕರಣ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್​ ಈ ಪ್ರಕರಣ  ರದ್ದು ಪಡಿಸಿದೆ. ಇದರೊಂದಿಗೆ ನಟರಾದ ದುನಿಯಾ ವಿಜಯ್, ಸಾಧು ಕೋಕಿಲಾ ಸೇರಿಂದತೆ ಕೆಲ ಕಲಾವಿದರಿಗೂ ರಿಲೀಫ್ ಸಿಕ್ಕಂತಾಗಿದೆ.

ರಾಮನಗರ ಠಾಣೆಯಲ್ಲಿ ದೂರು ದಾಖಲು

27 ಫೆಬ್ರವರಿ 2022 ರಂದು ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದಡಿ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಾಗಿತ್ತು. ಕನಕಪುರ ಸಂಗಮದಿಂದ ಪ್ರಾರಂಭಗೊಂಡಿದ್ದ ಮೇಕೆದಾಟು ಪಾದಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಾ.ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್​ ನಾಯಕರು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES