Monday, December 23, 2024

ದಸರಾಗೆ 18 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಮಹದೇವಪ್ಪ

ಮೈಸೂರು :  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ರೂ. ಅನುದಾನ ನೀಡಿದೆ ಎಂದು ಅಗತ್ಯವಿದ್ದರೆ ಹೆಚ್ಚಿನ ಅನುದಾನ ಸರ್ಕಾರ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು,ಕಳೆದ ದಸರಾಗಿಂತ ಕಡಿಮೆ ಹಣ ವೆಚ್ಚ ಮಾಡುವ ಗುರಿ ಹೊಂದಲಾಗಿದ್ದು, ಪ್ರಾಯೋಜಕತ್ವಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ದಸರಾ ಮಹೋತ್ಸವ ಉದ್ಘಾಟನಾ ದಿನದಂದು ಫಲಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ಕುಸ್ತಿ, ಸಿನಿಮಾ, ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.

ಇದನ್ನೂ ಓದಿ: ಪ್ರಭಾಸ್ ಕೆನ್ನೆಗೆ ಬಾರಿಸಿ ಓಡಿ ಹೋದ ಹುಡುಗಿ

ಜತೆಗೆ ಯುವಕರನ್ನು ಆಕರ್ಷಿಸಲು ಯುವ ಸಂಭ್ರಮ ಮತ್ತು ಯುವ ದಸರಾ ಕಾರ್ಯಕ್ರಮಗಳು ಇರಲಿದೆ. ಯುವ ಸಂಭ್ರಮದಲ್ಲಿಒಳ್ಳೆಯ ಸಂದೇಶ ಕೊಡಬೇಕು. ಬಹುತ್ವ ಭಾರತ, ಭಾರತದ ಸಂವಿಧಾನದ ಆಶಯ, ಸಾಮರಸ್ಯದ ಸಂದೇಶವನ್ನು ಯುವ ಜನತೆಯ ಮೂಲಕ ಜನತೆಗೆ ತಿಳಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES