Monday, December 23, 2024

ಮದ್ಯ ಹಗರಣ : ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ

ನವದೆಹಲಿ : ದೆಹಲಿ ಮದ್ಯ ಹಗರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದು ಬೆಳ್ಳಂಬೆಳಗ್ಗೆ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ತಪಾಸಣೆ ನಡೆಸಿತು. 10 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕ ಅವರನ್ನು ಇಡಿ ಬಂಧಿಸಿದೆ. ಮತ್ತೊಂದೆಡೆ, ಸಂಜಯ್ ಸಿಂಗ್ ಬಂಧನ ಖಂಡಿಸಿ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ED ದಾಳಿಯಲ್ಲಿ ಏನು ಸಿಕ್ಕಿಲ್ಲ

ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ ನಡೆಸಿದ್ದ ವಿಚಾರ ಕುರಿತು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಪ್ರತಿಕ್ರಿಯಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೋದಿಜಿ ಎಷ್ಟೇ ದಾಳಿ ನಡೆಸಿದರೂ AAP ಸಂಸದರ ನಿವಾಸದಲ್ಲಿ EDಗೆ ಏನೂ ಸಿಕ್ಕಿಲ್ಲ ಎಂದಿದ್ದಾರೆ.

ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ. ಆದರೆ ಏನೂ ಸಿಕ್ಕಿಲ್ಲ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಆವರಿಸಿದೆ. ಇದು ಅವರ ಹತಾಶ ಪ್ರಯತ್ನಗಳು. ಚುನಾವಣೆ ಸಮೀಪಿಸುತ್ತಿದ್ದಂತೆ ED, CBIನಂತಹ ಎಲ್ಲ ಸಂಸ್ಥೆಗಳು ಕ್ರಿಯಾಶೀಲವಾಗುತ್ತವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES