Wednesday, January 22, 2025

ಬಿಜೆಪಿಯವರೇ ವೇಷ, ಹೆಸರು ಬದಲಿಸಿ ಕಿಡಿಗೇಡಿತನ ಮಾಡ್ತಾರೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವ ಕೆಲಸವನ್ನ ಮೊದಲಿನಿಂದಲೂ ಬಿಜೆಪಿಗರು ಮಾಡಿಕೊಂಡು ಬಂದಿದ್ದಾರೆ ಎಂದು ಕುಟುಕಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದಾರೆ. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಹೆಸರು ಬದಲಿಸಿಕೊಂಡು ಭಾಗಿಯಾಗುತ್ತಾರೆ. ಇದೆಲ್ಲ ಅವರ ಹುಟ್ಟುಗುಣ, ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ಅವರು ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಗಾಂಧಿ ಪಾಯಿಂಟ್ ಕ್ಯಾಂಟಿನ್

ಸಾರಿಗೆ ನೌಕರರಿಗಾಗಿ ಕಡಿಮೆ ದರದಲ್ಲಿ ಊಟ, ಉಪಾಹಾರ ಸಿಗುವಂತಾಗಲು ಬಿಎಂಟಿಸಿ ಡಿಪೋ-4ರಲ್ಲಿ ಗಾಂಧಿ ಪಾಯಿಂಟ್ ಕ್ಯಾಂಟಿನ್ ಆರಂಭಿಸಲಾಗಿದೆ. ಇದೇ ರೀತಿ ಇತರೆ ಘಟಕಗಳಲ್ಲಿಯೂ ಕ್ಯಾಂಟೀನ್‌ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES