ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಶೇ.20 ರಷ್ಟು ಮುಸ್ಲಿಂ ಸಮುದಾಯದ ಮತಗಳು ಜೆಡಿಎಸ್ ಪಕ್ಷಕ್ಕೆ ಬಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹೆಚ್.ಡಿ ಕುಮಾರಸ್ವಾಮಿಯವರಿಗೆ 18 ಸಾವಿರ ಮತಗಳು ಬಂದಿದೆ, ಗೆದ್ದಿರುವ 19 ಶಾಸಕರಲ್ಲಿ ಇಬ್ಬರನ್ನು ಹೊರತುಪಡಿಸಿ ಎಲ್ಲಾ ಶಾಸಕರು ಗೆದ್ದಿರುವುದು ಮುಸ್ಲಿಂ ಮತಗಳಿಂದ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದಸರಾಗೆ 18 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಮಹದೇವಪ್ಪ
ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಎಸ್ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುರಿತು ಅಸಮಧಾನ ಉಂಟಾಗಿರುವುದು ಖಂಡಿತ ಎಂದು ಅವರು ಹೇಳಿದ್ದಾರೆ. ಬಿಜೆಪಿ ಸಿದ್ಧಾಂತ ಒಪ್ಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ಯಾ ಅಥವಾ ಜೆಡಿಎಸ್ ಸಿದ್ಧಾಂತವನ್ನ ಬಿಜೆಪಿ ಒಪ್ಪಿದ್ಯಾ..? ಜೆಡಿಎಸ್ ಗೆ ಬಿಜೆಪಿ ಜೊತೆ ಮೈತ್ರಿ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.
ಯಾರ ಸಿದ್ದಾಂತವನ್ನು ಯಾರು ಒಪ್ದಿದ್ದಾರೆ, ನಾನು ವಿಷಕಂಠನಂತೆ ಇದ್ದೇನೆ 16ನೇ ತಾರೀಖಿನಂದು ಈ ಕುರಿತು ಸಭೆ ನಡೆಸಿ ಮಾತನಾಡುತ್ತೇನೆ ಎಂದು ಅವರು ಹೇಳಿದರು.