Wednesday, January 22, 2025

ಕುಂಚಿಟಿಗರನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಒತ್ತಡ ಹೇರುತ್ತೇನೆ : ಟಿ.ಬಿ ಜಯಚಂದ್ರ

ಬೆಂಗಳೂರು : ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ  ಹೇರಲಾಗುತ್ತದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹೇಳಿದರು.

ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ  ಕೈಗೊಳ್ಳಬೇಕಾಗಿರುವ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ರಾಜ್ಯ ಸಚಿವ ಸಂಪುಟ ಸಭೆ ಈಗಾಗಲೇ  ನಿರ್ಧಾರ ಕೈಗೊಂಡಿದೆ. ತಾವು ಸಹ ದೆಹಲಿಗೆ ತೆರಳಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಈ ವಿಷಯವನ್ನು ಸಂಪುಟ ಸಭೆಯ ಮುಂದೆ ತರಲು ಒತ್ತಡ ಹೇರುವುದಾಗಿ ತಿಳಿಸಿದರು.

ಕೇಂದ್ರಕ್ಕೆ ಮಾಹಿತಿಯನ್ನು ರವಾನಿಸಿ

ಕೇಂದ್ರ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದ ಮಾಹಿತಿಯನ್ನು ರವಾನಿಸಬೇಕು.  ಆದಷ್ಟು ಬೇಗ ಕೇಂದ್ರ ಸರ್ಕಾರ ಈ ವಿಷಯವನ್ನು ಸಚಿವ ಸಂಪುಟ ಸಭೆಯ ಮುಂದೆ ತಂದು ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಜಯಚಂದ್ರ ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನೆ ಹಾಗೂ ನಿವೃತ್ತ ಕಾರ್ಯದರ್ಶಿ ತಿಪ್ಪೇಸ್ವಾಮಿ ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES