Monday, November 4, 2024

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ!

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್​​ ಆದೇಶ ನೀಡಿದೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಟ್ಟ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ನಿರಾಕರಿಸಿದೆ.

ಇದನ್ನೂ ಓದಿ: ಬಿಎಂಟಿಸಿಯಲ್ಲಿ 17 ಕೋಟಿ ಗೋಲ್‌ಮಾಲ್‌ : ಅಧಿಕಾರಿ ಬಂಧನ!

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಹತ್ಯೆ ಪ್ರಕರಣದ ಆರೋಪಿಗಳಾದ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9) ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES