Friday, April 4, 2025

ನ್ಯೂಜಿಲೆಂಡ್​ಗೆ 283 ರನ್ ಬಿಗ್ ಟಾರ್ಗೆಟ್

ಬೆಂಗಳೂರು : ಏಕದಿನ ವಿಶ್ವಕಪ್​-2023ರ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್​ ವಿರುದ್ಧ ಹಾಲಿ ಚಾಂಪಿಯನ್ಸ್​ ಇಂಗ್ಲೆಂಡ್​ ಸವಾಲಿನ ಟಾರ್ಗೆಟ್ ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಇಂಗ್ಲೆಂಡ್​ ತಂಡ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 282 ರನ್​ ಕಲೆ ಹಾಕಿತು.

ಇಂಗ್ಲೆಂಡ್​ ಪರ ಜೋ ರೂಟ್​ 77, ನಾಯಕ ಬಟ್ಲರ್ 43, ಬೈರ್ಸ್ಟೋವ್​ 33, ಬ್ರೂಕ್​ 25 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳು ಕಿವಿಸ್​ ಬೌಲರ್​ಗಳ ಮಾರಕ ದಾಳಿಗೆ ಪೆವಿಲಿಯನ್ ಪೆರೇಡ್ ನಡೆಸಿದರು. ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ 3, ಗ್ಲೆನ್ ಫಿಲಿಪ್ಸ್​ ಹಾಗೂ ಮಿಚೆಲ್ ಸ್ಯಾಂಟ್ನರ್ ತಲಾ ಎರಡು ವಿಕೆಟ್ ಪಡೆದರೆ, ಟ್ರೆಂಟ್​ ಬೌಲ್ಟ್​ ಹಾಗೂ ರವೀಂದ್ರ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

ನ್ಯೂಜಿಲೆಂಡ್ ತಂಡ

ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮ್ಯಾಟ್ ಹೆನ್ರಿ, ಮಿಚೆಲ್ ಸ್ಯಾಂಟ್ನರ್, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್.

RELATED ARTICLES

Related Articles

TRENDING ARTICLES