Wednesday, January 22, 2025

ಇಂದಿನಿಂದ ಭರತ ಖಂಡದಲ್ಲಿ ‘ವಿಶ್ವ’ ಕಪ್ ಕ್ರಿಕೆಟ್ ಸಂಭ್ರಮ!

ಬೆಂಗಳೂರು: ಏಕದಿನ ವಿಶ್ವಕಪ್​ ಕ್ರಿಕೆಟ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಈ ಪಂದ್ಯದೊಂದಿಗೆ ಕ್ರಿಕೆಟ್ ಮಹಾಸಮರಕ್ಕೆ ಚಾಲನೆ ದೊರೆಯಲಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯುತ್ತಿದ್ದು, ವಿಶ್ವಕಪ್​ಗಾಗಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ, ಅಫ್ಘಾನಿಸ್ತಾನ್, ನೆದರ್​ಲೆಂಡ್ಸ್, ಬಾಂಗ್ಲಾದೇಶ್ ಸೆಣಸಾಡಲಿವೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧ ದೂರು!

ಈ ಬಾರಿಯ ವಿಶ್ವಕಪ್​​ನ ಬಹುತೇಕ ಪಂದ್ಯಗಳು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇನ್ನು 2 ಪಂದ್ಯಗಳಿದ್ದಾಗ ಮೊದಲ ಮ್ಯಾಚ್ ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದೆ. ಬಹುನಿರೀಕ್ಷಿತ ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ವಿಶ್ವಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ಇರುವುದರಿಂದ 10 ತಂಡಗಳಿಗೂ ಒಂದೇ ಪಾಯಿಂಟ್ಸ್​ ಟೇಬಲ್​ ಇರಲಿದೆ. ಈ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಸೆಮಿಫೈನಲ್ ಆಡಲಿದೆ. 45 ದಿನಗಳ ಕಾಲ ನಡೆಯಲಿರುವ ಈ ವಿಶ್ವಕಪ್​ನಲ್ಲಿ ಸೆಮಿಫೈನಲ್ಸ್ ಹಾಗೂ ಫೈನಲ್​ ಸೇರಿ ಒಟ್ಟು 48 ಪಂದ್ಯಗಳನ್ನಾಡಲಾಗುತ್ತದೆ. ಇನ್ನೂ, ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

RELATED ARTICLES

Related Articles

TRENDING ARTICLES