Wednesday, January 22, 2025

ರಾಜ್ಯದಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣದಲ್ಲಿ ಹೆಚ್ಚಳ!

ವಿಜಯಪುರ : ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಸಾಂಕ್ರಾಮಿಕ ಕಾಯಿಲೆಗಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಅನಾರೋಗ್ಯ ಭೀತಿ ಸೃಷ್ಟಿಸಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳಂತೆ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಕಾಣಿಸಿಕೊಂಡಿವೆ. ದಿನ ಕಳೆದಂತೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ನಿಮಗೆ ಇಷ್ಟ ಇದ್ರೆ ಮುಂದಿನ ಬಾರಿ ಗೆಲ್ಸಿ ಇಲ್ಲಾ ಬಿಡಿ : ಶಾಸಕ ವೀರೇಂದ್ರ ಪಪ್ಪಿ ಗರಂ

ಸೆಪ್ಟೆಂಬರ್ ತಿಂಗಳಲ್ಲಿಯೇ ಜಿಲ್ಲೆಯಲ್ಲಿ ಅಧಿಕ ಪ್ರಕರಣ ದಾಖಲಾಗಿವೆ. ಇದೇ ತಿಂಗಳಲ್ಲಿ 21 ಚಿಕನ್ ಗುನ್ಯಾ ಹಾಗೂ 46 ಡೆಂಗ್ಯೂ ಪಾಜಿಟಿವ್ ಪ್ರಕರಣ ದಾಖಲಾಗಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಈ ವರ್ಷ ಜನವರಿ ಆರಂಭದಿಂದ ಸೆಪ್ಟೆಂಬರ್ ಕೊನೆಯವರೆಗೂ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 2,702 ಡೆಂಗ್ಯೂ ಶಂಕಿತ ಲಕ್ಷಣಗಳು ಕಂಡು ಬಂದಿವೆ.

ಅವುಗಳಲ್ಲಿ 2164 ಶಂಕಿತರ ರಕ್ತಪರೀಕ್ಷೆ ಕೈಗೊಳ್ಳಲಾಗಿದ್ದು, 206 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಇನ್ನೂ ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 1107 ಚಿಕನ್ ಗುನ್ಯಾ ಶಂಕಿತ ಲಕ್ಷಣಗಳು ಕಂಡು ಬಂದಿದ್ದು, ಇವುಗಳಲ್ಲಿ 117 ಚಿಕುನ್ ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ಜಿಲ್ಲೆಯ ಜನ ಆತಂಕ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES