Wednesday, January 22, 2025

ಶೀಘ್ರ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ MRI ಸ್ಕ್ಯಾನಿಂಗ್​ ವ್ಯವಸ್ಥೆ: ಸಚಿವ ದಿನೇಶ್​ ಗುಂಡೂರಾವ್​!

ಬೆಂಗಳೂರು : ಜಿಲ್ಲಾಸ್ಪತ್ರೆಗಳಲ್ಲಿ MRI ಸ್ಕ್ಯಾನಿಂಗ್​ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ MRI ಸ್ಕ್ಯಾನಿಂಗ್​ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಬೆಲೆಗೆ ಸಾಲುಗಟ್ಟಿ ನಿಲ್ಲುವುದು ತಪ್ಪಲಿದೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಮತ್ತು ಫ್ಲಿಪ್‌ಕಾರ್ಟ್ ವಿರುದ್ಧ ದೂರು!

ಈ ಹಿಂದೆಯೇ ಈ ಕುರಿತು ಆರೋಗ್ಯ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸಿಎಂ ಆದೇಶದಂತೆ ಕಾರ್ಯರೂಪಕ್ಕೆ ತರಲು ಆರೋಗ್ಯ ಇಲಾಖೆ ಸಜ್ಜಾಗಿದ್ದು ವೈದ್ಯಕೀಯ ಕಾಲೇಜುಗಳ ಅಧೀನದಲ್ಲಿ ಬರುವ ಆಸ್ಪತ್ರೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ.

ಸದ್ಯ ಅನೇಕ ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ MRI ಚಿಕಿತ್ಸೆ ಲಭ್ಯವಿದೆ, ಉಳಿದಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ರೂಪಿಸಲು ಇಲಾಖೆಗೆ ಸಿಎಂ ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES