Wednesday, January 22, 2025

RSS, ಬಜರಂಗದಳದವರು ಒಳ್ಳೆಯವರು, ಇದಕ್ಕೆಲ್ಲಾ ಪಿತಾಮಹ BJP : ಚಲುವರಾಯಸ್ವಾಮಿ

ಮಂಡ್ಯ : ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದಾರೆ. ಆ ರೀತಿಯ ನಿರ್ಧಾರ ಆಗಿರುವ ಬಗ್ಗೆ ಗೊತ್ತಿಲ್ಲ. ಅವರ ಬಳಿ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.

ಶಿವಮೊಗ್ಗ ಗಲಾಟೆಗೆ ಕಾಂಗ್ರೆಸ್ ಸಚಿವರು ಕಾರಣ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗಲಾಟೆಗಳು ಹುಟ್ಟುವುದು RSS ಹಿನ್ನೆಲೆಯಲ್ಲಿ. ಇದಕ್ಕೆಲ್ಲಾ ಪಿತಾಮಹ ಬಿಜೆಪಿ. RSS, ಬಜರಂಗದಳದಲ್ಲಿ ಒಳ್ಳೆಯವರಿದ್ದಾರೆ. ರಾಜಕಾರಣದ ಲಾಭ ಪಡೆಯಲು ಬಿಜೆಪಿ ಎರಡು ಸಂಸ್ಥೆ ಉಪಯೋಗಿಸಿಕೊಳ್ತಿದೆ ಎಂದು ಕುಟುಕಿದ್ದಾರೆ.

ತಮಿಳುನಾಡಿಗೆ KRS ಜಲಾಶಯದಿಂದ ನೀರು ಹರಿಸುತ್ತಿರುವ ವಿಚಾರವಾಗಿ ಸಚಿವ ಮಾತನಾಡಿದ ಅವರು, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಹೋಗಿ ಕೇಳಲಿ. ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದು ಚಾಟಿ ಬೀಸಿದ್ದಾರೆ.

RELATED ARTICLES

Related Articles

TRENDING ARTICLES