Wednesday, January 22, 2025

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ : ಪುತ್ರ ಉಮೇಶ್ ಸ್ಪಷ್ಟನೆ

ಬೆಂಗಳೂರು : ಸಾಲುಮರದ ತಿಮಕ್ಕರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದ ಸುಳ್ಳು ಸುದ್ದಿಗೆ ದತ್ತು ಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ.

ಸಾಲು ಮರದ ತಿಮಕ್ಕ ಅವರು ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹರಡಬೇಡಿ ಎಂದು ಉಮೇಶ್‌ ಮನವಿ ಮಾಡಿದ್ದಾರೆ. ಅಲ್ಲದೆ, ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.

ತಿಮ್ಮಕ್ಕರ ಆರೋಗ್ಯದಲ್ಲಿ ಈಗ ಚೇತರಿಕೆ ಕಾಣಿಸಿಕೊಂಡಿದ್ದು ಊಟವನ್ನೂ ಮಾಡುತ್ತಿದ್ದಾರೆ. ಬೆಳಗ್ಗೆ ತಿಂಡಿ ತಿನ್ನಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ತಿಮ್ಮಕ್ಕ ಕೂಡ ಮಗನೊಂದಿಗೆ ಮಾತನಾಡಿದ್ದಾರೆ. ಸದ್ಯ ಅವರಿಗೆ ವಿಶೇಷ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನ ಮನೆಯಲ್ಲಿ ವಾಸವಾಗಿರುವ ಸಾಲುಮರದ ತಿಮ್ಮಕ್ಕ ದಿಢೀರನೆ ವಾತಾವರಣ ಬದಲಾವಣೆಯಿಂದ ಉಸಿರಾಟ ಸಮಸ್ಯೆ ಉಂಟಾಗಿತ್ತು. ಮಂಗಳವಾರ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು.

ಭಾವಪೂರ್ಣ ಶ್ರದ್ಧಾಂಜಲಿ?

ಇನ್ನು ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಬಗ್ಗೆ ತಿಳಿಯದ ಕೆಲವರು ಬದುಕಿರುವಾಗಲೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES