Thursday, December 19, 2024

ದೇವೇಗೌಡ್ರು ಕೊಡುಗೆ ಮೇಲೆ ಕುಮಾರಸ್ವಾಮಿ ರಾಜಕಾರಣ ಮಾಡ್ತಿದ್ದಾರೆ : ಚಲುವರಾಯಸ್ವಾಮಿ

ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ಕುಮಾರಸ್ವಾಮಿ ಅವರು ದೇವೇಗೌಡ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ ಎಂದು ಹೆಚ್​ಡಿಕೆ ವಿರುದ್ಧ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುಡುಗಿದರು.

ಅಲ್ಪ ಸಂಖ್ಯಾತ ಮತಗಳು ಜೆಡಿಎಸ್ ಕೈಹಿಡಿಯಲಿಲ್ಲ ಎಂಬ ಹೆಚ್ಡಿಕೆ ಹೇಳಿಕೆ ವಿಚಾರ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಕುಮಾರಸ್ವಾಮಿ ಸಾಧನೆ ಏನೂ ಅಂತ ನಿಮಗೂ, ನಮಗೂ ಗೊತ್ತಿದೆ. ವೋಟ್ ಹಾಕಿಸ್ಕೊಳಕ್ಕೆ ಏನ್ ಮಾತನಾಡಬೇಕು ಅದನ್ನು ಮಾತನಾಡ್ತಾರೆ ಎಂದು ಕುಟುಕಿದರು.

ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು? ಇವರ ತಂದೆ ದೇವೇಗೌಡ್ರು ಕೊಡುಗೆಯನ್ನೇ ಎಷ್ಟು ಸಲ ಹೇಳ್ತಾರೆ. ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜಿಲ್ಲೆ ಜನರು ಅವರಿಗೆ ಕೃತಜ್ಞತೆ ಸಲ್ಲಿಸಿಯಾಯ್ತು ಎಂದು ಚಾಟಿ ಬೀಸಿದರು.

ರಾತ್ರಿಯಲ್ಲ ಕನಸು ಕಾಣೋಕೆ ಹೇಳಿ

ಸಂಕ್ರಾಂತಿ ವೇಳೆಗೆ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾತ್ರಿಯಲ್ಲ ಕನಸು ಕಾಣೋಕೆ ಹೇಳಿ. ಐದು ವರ್ಷ‌ ಕಾಂಗ್ರೆಸ್​ ಸರ್ಕಾರ ಕಂಪ್ಲೀಟ್ ಮಾಡಿದ್ಮೇಲೆ ಗೊತ್ತಾಗುತ್ತೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಲ್ಲಿ ಮೂರು ಡಿಸಿಎಂ ಕೂಗು ವಿಚಾರದ ಬಗ್ಗೆ ಮಾತನಾಡಿ, ಅದೆಲ್ಲವನ್ನು ಪಕ್ಷ ನೋಡಿಕೊಳ್ಳುತ್ತದೆ ಎಂದು ಜಾಣ್ಮೆಯ ಉತ್ತರ ನೀಡಿದರು.

RELATED ARTICLES

Related Articles

TRENDING ARTICLES