ಕಲಬುರಗಿ : ನಿರಂತರ ಮಳೆಯಿಂದ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ತೊಗರಿ ಬೆಳೆ ನಾಶವಾಗಿದೆ.
ತೊಗರಿಯ ಕಣಜವೆಂದು ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಕೊಳೆಯುತ್ತಿದ್ದು, ದಾಸ್ತಾನು ಕಡಿಮೆಯಾಗುವ ಆತಂಕ ಎದುರಾಗಿದೆ. ಅತಿಯಾದ ತೇವಾಂಶದಿಂದ ತೊಗರಿ ಬೆಳೆ ಹಳದಿ ಬಣ್ಣಕ್ಕೆ ತಿರುಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೊಗರಿಗೆ ಬೇಡಿಕೆ ಹೆಚ್ಚಿದೆ. ಆದರೆ ಅದನ್ನು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: ಯುವತಿ ಆತ್ಮಹತ್ಯೆ: ದೂರು ದಾಖಲಿಸಲು ಹಿಂದೇಟು, PSI ಅಮಾನತು!
ಕಲಬುರಗಿ ಜಿಲ್ಲೆಯ ತೊಗರಿ ಬೆಳೆಗೆ A ಗ್ರೇಡ್ ಮಾನ್ಯತೆ ಸಿಕ್ಕಿದೆ. ಆದರೆ, ಸದ್ಯ ತೊಗರಿ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದು, ದಿಕ್ಕೆ ತೋಚದಂತಾದ ಸ್ಥಿತಿಯಲ್ಲಿದ್ದಾರೆ. ತೊಗರಿ ಬೆಲೆ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಲಿದೆ. ಬೆಲೆ ಏರಿಕೆಯ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕರಿಗೂ ತೊಂದರೆಯಾಗಲಿದೆ.