Tuesday, December 3, 2024

ಸಚಿವ ಮುನಿಯಪ್ಪರ ತೋಟದಲ್ಲಿ ಕಾರ್ಮಿಕ ಅನುಮಾನಾಸ್ಪದ ಸಾವು!

ಬೆಂಗಳೂರು : ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ಅವರ ಕಂಬದಹಳ್ಳಿಯ ತೋಟದಲ್ಲಿ ಕಾರ್ಮಿಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ನಾಗರಾಜು (45) ಮೃತ ಕಾರ್ಮಿಕ ಎನ್ನಲಾಗಿದೆ. ಈತನು ಶಿಡ್ಲಘಟ್ಟ ತಾಲೂಕಿನ ಮಳ್ಳೂರು ನಿವಾಸಿ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮೃತ ನಾಗರಾಜು ಅವರ ಪತ್ನಿ ಪ್ರತಿಕ್ರಿಯಿಸಿದ್ದು ವಿಷ ಸೇವಿಸಿ ಆತ್ಮಹತ್ಯ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ನಾಗರಾಜು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾಗಾಗಿ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗರಾಜು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES