Wednesday, January 22, 2025

ಗೋರೆಗಾಂವ್​ನ ಅಗ್ನಿ ಅವಘಡ, 6 ಮಂದಿ ಸಾವು!

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ.

ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಕಟ್ಟಡದಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ನಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ದಳಪತಿ ವಿಜಯ್​ ಅಭಿನಯದ ಲಿಯೋ ಚಿತ್ರದ ಟ್ರೈಲರ್ ಔಟ್!

ವಿವರಗಳ ಪ್ರಕಾರ, ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು ನಡೆಯುತ್ತಿವೆ.

RELATED ARTICLES

Related Articles

TRENDING ARTICLES