ಬೆಂಗಳೂರು : ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರಿದಿದೆ.
ಭಾರತೀಯ ಹಾಕಿ ತಂಡವು ಎದುರಾಳಿ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ, ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಈ ಮೂಲಕ 2024ರಲ್ಲಿ ಪ್ಯಾರಿಸ್ನಲ್ಲಿ ನಡೆಯಲಿರುವ ಒಲಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದೆ.
ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ರೋಹಿದಾಸ್ ಅಮಿತ್ ಗೋಲು ಗಳಿಸುವ ಮೂಲಕ ಜಪಾನ್ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೂಲಕ ಭಾರತವು ಏಷ್ಯನ್ ಗೇಮ್ಸ್‌ನಲ್ಲಿ 100 ಪದಕಗಳ ಹಡಿಯನ್ನು ತಲುಪುವುದು ಬಹುತೇಕ ಖಚಿತವಾಗಿದ್ದು, ಇದೇ ಮೊದಲ ಬಾರಿಗೆ ಈ ಸಾಧನೆ ಮಾಡಲಿದೆ.
ಇದು 1966, 1998, ಮತ್ತು 2014ರ ನಂತರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಕಿ ತಂಡಕ್ಕೆ 4ನೇ ಚಿನ್ನದ ಪದಕವಾಗಿದೆ. ಭಾರತವು 4 ವರ್ಷಗಳ ಹಿಂದೆ ಜಕಾರ್ತಾ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟಿತ್ತು. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು ಹಾಕಿಯಲ್ಲಿ ಜಂಟಿ ಎರಡನೇ ಅತ್ಯಂತ ಯಶಸ್ವಿ ಪುರುಷರ ತಂಡವಾಗಿದೆ.
Golden Victory Alert: #HockeyHigh portrayed right by our #MenInBlue 🏒
Team 🇮🇳 outshines 🇯🇵 5⃣-1⃣ and brings home🥇& also a #ParisOlympics Quota 🥳
What a match!!
Great work guys💯 Keep shining 💪🏻#Cheer4India#HallaBol#JeetegaBharat#BharatAtAG22 🇮🇳 pic.twitter.com/UKCKom45tP
— SAI Media (@Media_SAI) October 6, 2023