Friday, January 10, 2025

ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ.. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಉತ್ತರ ಕೊಡಲು ಹಿಂದೂ ಸಮಾಜ ಸಿದ್ದ : ಅರುಣ್ ಪುತ್ತಿಲ

ಶಿವಮೊಗ್ಗ : ಸರ್ಕಾರ ತಲ್ವಾರ್ ಹಿಡಿದು ಮೆರವಣಿಗೆಗೆ ಅವಕಾಶ ಕೊಡ್ತಾರೆ ಅಂದ್ರೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ದವಿದೆ ಎಂದು ಕಿಡಿಗೇಡಿಗಳಿಗೆ ಹಿಂದೂ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಎಚ್ಚರಿಕೆಯ ಸಂದೇಶ ರವಾನಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕ್ಯೂಡ್ರೈವರ್, ಸ್ಯ್ಪಾನರ್ ಕೈ ಬಿಡಿ. ತಲ್ವಾರ್ ಗಳಿಗೆ ಪೂಜೆ ಮಾಡಿ. ಸರ್ಕಾರ ತಕ್ಷಣ ಪರಿಹಾರ ಕೊಡಬೇಕು. ಹಾನಿಯಾಗಿರುವ  ಮನೆಗಳಿಗೆ ಸಂಪೂರ್ಣ ಖರ್ಚು ಸರ್ಕಾರ ಭರಿಸಬೇಕು ಎಂದು ಆಗ್ರಹಿಸಿದರು.

ಶಾಂತಿ ಸುವ್ಯವಸ್ಥೆ ನಡುವೆ ಬಹುಸಂಖ್ಯಾತರು ಬದುಕಲು ಕಷ್ಟ ಇದೆ. ಸರ್ಕಾರ ಗಂಭೀರವಾದ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಮೇಲೆಯೂ ಹಲ್ಲೆ ನಡೆದಿದೆ. ಪೊಲೀಸರ ‌ಬಗ್ಗೆ ಗೌರವ ಇದೆ. ಸರ್ಕಾರ ಪೊಲೀಸರ ಅಧಿಕಾರ ಹಸ್ತಕ್ಷೇಪ ಮಾಡ್ತಿದೆ. ಇಲಾಖೆಗೆ ಪಾರದರ್ಶಕವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು. ಸಮಾಜಕ್ಕೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆಗೆ ರಕ್ಷಣೆ ಕೊಡಬೇಕಾದ ಕೆಲಸ ಮಾಡದೇ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಹೇಳಿದರು.

ಶಿಕ್ಷಕರ ಮನೆಗೆ ನುಗ್ಗಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಮತಾಂಧ ಮುಸ್ಲಿಂ ಸಮುದಾಯದಿಂದ ಘಟನೆ ಆಗಿದೆ. ಅವರಿಗೆ ಸಾಂತ್ವಾನ ಹೇಳಲು ಇಲ್ಲಿಗೆ ಆಗಮಿಸಿದ್ದೇನೆ. ಅವರ ಜೊತೆಗೆ ನಾವಿದ್ದೇವೆ. ಮುಸ್ಲಿಂ ಪುಷ್ಟೀಕರಣಕ್ಕೆ, ಮುಸ್ಲಿಂ ಮತಗಳನ್ನು ಓಲೈಸಲು ಸರ್ಕಾರ ಮತಾಂಧ ಶಕ್ತಿಗೆ ಕುಮ್ಮಕ್ಕು ಕೊಡ್ತಿದೆ. ಇದು ಪೂರ್ವ ನಿಯೋಜಿತ ಕೃತ್ಯ. ಈ ಭಾಗದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ಮಾಡ್ತದೆ. ಹಿಂದೂ ಸಮಾಜಕ್ಕೆ ದೊಡ್ಡ ಶಕ್ತಿ ಬರುತ್ತದೆ ಅಂತ ಘಟನೆ ನಡೆದಿವೆ. ರೋಹನ್ ಎನ್ನುವ ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ವಾಹನ ಜಖಂ ಆಗಿದೆ. ಶಿಕ್ಷಕರ ಮನೆಗೆ ನುಗ್ಗಿ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಇಡೀ ನಾಗರಿಕ ಸಮುದಾಯ ತಲೆ ತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES