Monday, December 23, 2024

ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಹೊಸ ಸುಂಕ ಪದ್ಧತಿ..!

ಬೆಂಗಳೂರು : ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಹೊಸ ಟ್ಯಾಕ್ಸ್​ ಪದ್ಧತಿಯನ್ನ ರಾಜ್ಯ ಸರ್ಕಾರ ಜಾರಿಗೆ ತರಲು ಚಿಂತನೆ ನಡೆಸಿದೆ.

ಸಂಚಾರ ದಟ್ಟಣೆ ಇರುವ 9 ಕಡೆಗಳಲ್ಲಿ ಸಂಚಾರ ದಟ್ಟಣೆ ಟ್ಯಾಕ್ಸ್ ವಿಧಿಸಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಕರ್ನಾಟಕ ದಶಕ -1 ಟ್ರಿಲಿಯನ್ ಆರ್ಥಿಕತೆಗೆ ನೀಲಿನಕ್ಷೆ ಎಂಬ ಸಮಗ್ರ ವರದಿಯಲ್ಲಿ ದಟ್ಟಣೆ ಸುಂಕ ವಿಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಸಮಯದಲ್ಲಿ ನಗರದ ಆಯ್ದ ಪ್ರದೇಶಗಳಲ್ಲಿ ಪ್ರವೇಶಿಸುವ ವಾಹನಗಳಿಗೆ ವಿಧಿಸುವ ಶುಲ್ಕ ಇದು.

ಇದನ್ನೂ ಓದಿ: ಗೋರೆಗಾಂವ್​ನ ಅಗ್ನಿ ಅವಘಡ, 6 ಮಂದಿ ಸಾವು!

ಹೆಚ್ಚಿನ ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲಿ ಪೀಕ್ ಅವರ್ನಲ್ಲಿ ಬೆಂಗಳೂರಿಗೆ ಬರುವ ವಾಹನಗಳು ಶುಲ್ಕ ಪಾವತಿಸಬೇಕಾಗುತ್ತದೆ. ಈ ರೀತಿ ಮಾಡೋದ್ರಿಂದ ಸಂಚಾರ ದಟ್ಟಣೆ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಕಡಿಮೆ ಮಾಡಲು ಸಹಕಾರಿ ಅನ್ನೋ ಲೆಕ್ಕಾಚಾರ ಇದರ ಹಿಂದೆ ಇದೆ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES