Monday, December 23, 2024

ಎಣ್ಣೆ ಹೊಡೆಯುವುದನ್ನ ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ : ಡಿ.ಕೆ. ಶಿವಕುಮಾರ್

ರಾಮನಗರ : ಜನ ಎಣ್ಣೆ (ಮದ್ಯ ಸೇವನೆ) ಹೊಡೆಯುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಹಳ್ಳಿಗಳಲ್ಲಿ ನಾವು ಮದ್ಯದಂಗಡಿಗಳನ್ನು ತೆರೆಯುವುದಿಲ್ಲ. ಸೂಕ್ತ ಪ್ರದೇಶಗಳಲ್ಲಿ ಮಾತ್ರವೇ ಬಾರ್ ತೆರೆಯುತ್ತೇವೆ. ಎಲ್ಲರೊಂದಿಗೆ ಚರ್ಚೆ ಮಾಡಿ, ಸೂಕ್ತ ಪ್ರದೇಶಗಳಲ್ಲಿ ಬಾರ್ ಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಲಿಂಗಾಯತ ನಾಯಕರ ಭಿನ್ನಮತ ವಿಚಾರವಾಗಿ ಮಾತನಾಡಿ, ಲಿಂಗಾಯಿತ ಸಮುದಾಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೇವಲ ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಆಗುತ್ತಿದೆ. ಕೆಲ ಅಧಿಕಾರಿಗಳು ಮಾತನಾಡುತ್ತಾರೆ ಅಷ್ಟೇ. ಜನರು ನಮಗೆ ನೀಡಿರುವ ಅವಕಾಶ ಬಳಸಿಕೊಂಡು ಸೇವೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಸಿಎಂ, ಡಿಸಿಎಂ ದ್ವಂದ್ವ ಹೇಳಿಕೆ

ರಾಜ್ಯದಲ್ಲಿ 1,000 ನೂತನ ಮದ್ಯದಂಗಡಿಗಳನ್ನು ತೆರೆಯಲಾಗುವುದು ಎಂದು ಅಬಕಾರಿ ಸಚಿವ ಆರ್​.ಬಿ. ತಿಮ್ಮಾಪುರ ಹೇಳಿದ್ದಾರೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಮಹಿಳೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಯಾವುದೇ ರೀತಿಯ ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲ್ಲ ಎಂದಿದ್ದು, ಸಚಿವ ತಿಮ್ಮಾಪುರ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

RELATED ARTICLES

Related Articles

TRENDING ARTICLES