Friday, November 22, 2024

ಭಾರತಕ್ಕೆ ಆಘಾತ..! ಶುಭ್​ಮನ್​ ಗಿಲ್​ಗೆ ಡೆಂಘೀ ಜ್ವರ

ಬೆಂಗಳೂರು : ಏಕದಿನ ಕ್ರಿಕೆಟ್ ವಿಶ್ವಕಪ್-2023 ಟೂರ್ನಿಯಲ್ಲಿ ತಾನಾಡುವ ಮೊದಲ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಎದುರು ಸೆಣಸಲಿದೆ. ಆದರೆ, ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.

ಬೊಂಬಾಟ್ ಫಾರ್ಮ್​ನಲ್ಲಿರುವ ಭಾರತದ ಯಂಗ್​ ಗನ್​ ಖ್ಯಾತಿಯ ಆರಂಭಿಕ ಬ್ಯಾಟರ್ ಶುಭ್​ಮನ್ ಗಿಲ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 14ರಂದು ಚೆನ್ನೈನಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಒಂದು ವೇಳೆ ಗಿಲ್ ಅಲಭ್ಯರಾದರೆ, ಅವರ ಬದಲು ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಸದ್ಯ ಏಕದಿನ ಕ್ರಿಕೆಟ್ ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಶುಭ್​ಮನ್ ಗಿಲ್, ಭಾರತದ ಭರವಸೆಯ ಬ್ಯಾಟರ್‌ಗಳಲ್ಲಿ ಒಬ್ಬರೆನಿಸಿದ್ದಾರೆ. ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಡೆಂಘೀ ತಪಾಸಣೆಗೆ ಒಳಗಾಗಲಿದ್ದಾರೆ.

ಶುಭ್​ಮನ್ ಗಿಲ್ ಅವರು ಚೆನ್ನೈಗೆ ಬಂದಿಳಿದಾಗಿನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ನಡೆಯುತ್ತಿವೆ. ಅವರು ಮೊದಲ ಪಂದ್ಯದಲ್ಲಿ ಆಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

RELATED ARTICLES

Related Articles

TRENDING ARTICLES