Friday, December 27, 2024

ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಬಹುದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕಾವೇರಿಗೆ ಪೂಜೆ ಸಲ್ಲಿಸಿದ ನಟ ಅಭಿಷೇಕ್​ ಮತ್ತು ಅವಿವಾ!

ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

RELATED ARTICLES

Related Articles

TRENDING ARTICLES