Saturday, January 11, 2025

ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ಅಟ್ಟಹಾಸ!

ಜೆರುಸಲೇಮ್​ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯ ಪ್ರದೇಶದಿಂದ ಇಸ್ರೇಲ್ ಮೇಲೆ ಹಲವು ರಾಕೆಟ್ ದಾಳಿ ನಡೆದಿದ್ದು, ಇದರ ಪರಿಣಾಮವಾಗಿ ಇಸ್ರೇಲ್ ಯುದ್ಧ ಘೋಷಿಸಿರುವುದಾಗಿ ವರದಿಯಾಗಿದೆ.

ಗಾಜಾಪಟ್ಟಿಯ ವಿವಿಧ ಸ್ಥಳದಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ದೇಶದ ದಕ್ಷಿಣ ಮತ್ತು ಸೆಂಟ್ರಲ್ ಪ್ರದೇಶದಲ್ಲಿ ವಾಸವಾಗಿರುವ ಜನರು ಮನೆಯಿಂದ ಹೊರಗೆ ಬಾರದಂತೆ ಇಸ್ರೇಲ್ ಸೇನಾಪಡೆ ಎಚ್ಚರಿಕೆಯ ಸಂದೇಶ ರವಾನಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ: ಬೀದರ್​ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ : 53 ಲಕ್ಷ ಮೌಲ್ಯದ ವಸ್ತು ವಶಕ್ಕೆ!

ಗಾಜಾಪಟ್ಟಿಯಿಂದ ಇಸ್ರೇಲ್ ನೊಳಗೆ ನೂರಾರು ಉಗ್ರರು ಒಳನುಸುಳಿದ್ದು, ಅವರ ಹೆಡೆಮುರಿ ಕಟ್ಟಿಹಾಕುವ ನಿಟ್ಟಿನಲ್ಲಿ ಯುದ್ಧ ಘೋಷಿಸಿರುವುದಾಗಿ ವರದಿ ಹೇಳಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ ಎಂದು ವರದಿ ತಿಳಿಸಿದೆ.

ರಾಕೆಟ್ ದಾಳಿಯಲ್ಲಿ 70 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಸೆಂಟ್ರಲ್ ಇಸ್ರೇಲ್ ನಲ್ಲಿ ಕಟ್ಟಡವೊಂದರ ಮೇಲೆ ರಾಕೆಟ್ ದಾಳಿ ನಡೆದ ಪರಿಣಾಮ ವ್ಯಕ್ತಿಯೊಬ್ಬರು ಅವಶೇಷಗಳಡಿ ಸಿಲುಕಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES