Sunday, November 24, 2024

ಅಕ್ರಮವಾಗಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾ ವಶ

ಬೆಂಗಳೂರು : ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2,300 ಕೆ.ಜಿ. ಒಣ ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ನಗರ ಜಿಲ್ಲೆ-5 ಅಬಕಾರಿ ಉಪ ಆಯುಕ್ತರಾದ ವೀರಣ್ಣ ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ ಉಪವಿಭಾಗ-10 ಉಪ ಅಧೀಕ್ಷಕರಾದ ದೇವರಾಜ್ ಅಬಕಾರಿ ಇವರ ನೇತೃತ್ವದಲ್ಲಿ ಹಾಗೂ ಅಬಕಾರಿ ನಿರೀಕ್ಷಕರಾದ ಅಬುಬಕರ್ ಮುಜಾವರ ಮತ್ತು ಅಬಕಾರಿ ಸಿಬಂದ್ದಿಗಳೊಂದಿಗೆ ಮಹದೇವಪುರ ವ್ಯಾಪ್ತಿಯ ದೂರವಾಣಿನಗರದಲ್ಲಿ ಕಾರ್ಯಾಚರಣೆ ನಡೆಸಿತ್ತು.

ಈ ಸುದ್ದಿ ಓದಿದ್ದೀರಾ? : ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಒಂದೇ ಕುಟುಂಬವಲ್ಲ, ಆ ಕುಟುಂಬದಿಂದ ದೇಶದ ಅಭಿವೃದ್ಧಿಯೂ ಆಗಿಲ್ಲ : ಮೋದಿ ಗುಡುಗು 

ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿ.ಎಂ.ಟಿ.ಸಿ. ಕಾರ್ಯಾಗಾರದ ಹತ್ತಿರ ದಾಳಿ ನಡೆಸಿ, ಮಾರಾಟಕ್ಕಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 2.300 ಕೆ.ಜಿ. ಒಣ ಗಾಂಜಾ ವಶಪಡಿಸಿಕೊಂಡಿದ್ದಾರೆ. ಉತ್ತರಪ್ರದೇಶದ ತೇಜುಸಿಂಗ್ ಕೋಂ ಜಯದೇವಸಿಂಗ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಎನ್.ಡಿ.ಪಿ.ಎಸ್ ಕಾಯ್ದೆ-1985 ರಡಿ ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES